ಅರಕಲಗೂಡು: ತಾಲೂಕಿನ ದೊಡ್ಡ ಬೆಮ್ಮತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಅರಣ್ಯ ಇಲಾಖೆ ಸಹಯೋಗದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗ್ರಾಪಂ ಮಾಜಿ ಅಧ್ಯಕ್ಷೆ ಹೇಮಲತಾ ಮಾತನಾಡಿ, ಮಾನವನ ಚಟುವಟಿಕೆಯಿಂದ ಪರಿಸರ ನಾಶವಾಗುತ್ತಿದ್ದು ಇದನ್ನು ತಡೆಗಟ್ಟುವ ವ್ಯವಸ್ಥೆಯನ್ನು ಬೆಳೆಸಿಕೊಳ್ಳಬೇಕು. ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.
ಅರಣ್ಯ ಇಲಾಖೆಯ ಗಸ್ತು ವನಪಾಲಕ ರೋಹಿತ್ ಅವರು ಪರಿಸರ ಸಂರಕ್ಷಣೆಯಲ್ಲಿ ಕಾಡುಗಳ ಮಹತ್ವ ಕುರಿತು ವಿವರಿಸಿದರು. ಕೃಷಿ ಮೇಲ್ವಿಚಾರಕ ಸುನೀಲ್ ಕುಮಾರ್ ಅವರು ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯಶಿಕ್ಷಕ ಯತಿರಾಜ್ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಪದಾಧಿಕಾರಿಗಳಾದ ಯೋಗಾಚಾರ್, ರವಿಚಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ್, ಸೇವಾ ಪ್ರತಿನಿಧಿ ಮಾದೇವಿ ಇತರರಿದ್ದರು.