ಕಾರವಾರ: ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಕಾಳಜಿ ವಹಿಸುವಂತೆ ಹಾಗೂ ಅದು ಕೇವಲ ವಿಶ್ವ ಪರಿಸರ ದಿನಕ್ಕೆ ಮಾತ್ರ ಸೀಮಿತವಾಗಿರದೆ ದಿನನಿತ್ಯದ ಕಾಯಕವಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ.ಸಂತೋಷ ಹೇಳಿದರು.
ಅವರು ಶುಕ್ರವಾರ ಗೋಖಲೆ ಸೆಂಟಿನರಿ ಕಾಲೇಜು, ಯು.ಜಿ.ಸಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ
ಕಛೇರಿ, ಕಾರವಾರ ಹಾಗೂ ಸಂಗಮ ಸೇವಾ ಸಂಸ್ಥೆ (ರಿ) ಬಾಳೇಗುಳಿ, ಅಂಕೋಲಾ ಹಾಗೂ ಗೋಖಲೆ ಸೆಂಟಿನರಿ ಕಾಲೇಜು ಎನ್.ಎಸ್.ಎಸ್. ಘಟಕ
ಅಂಕೋಲಾ ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು”
ಎಂಬ ಘೋಷವಾಕ್ಯದ ವಿಷಯದ ಕುರಿತಾಗಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಪರಿಸರದಲ್ಲಿ ಭೂ ಮಾಲಿನ್ಯ, ಜಲಮಾಲಿನ್ಯ ವಾಯುಮಾಲಿನ್ಯವಾಗದಂತೆ ತಡೆಯುವುದು ಹಾಗೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಹಾಗೂ ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬ್ಯಾಟರಿ ತ್ಯಾಜ್ಯ, ಅಪಾಯಕಾರಿ ತ್ಯಾಜ್ಯ ಹಾಗೂ ಘನತ್ಯಾಜ್ಯಗಳ ನಿರ್ವಹಣೆ ಮತ್ತು ಅವುಗಳ ವೈಜ್ಞಾನಿಕ ವಿಲೇವಾರಿ ಬಗ್ಗೆ, ಅವುಗಳ ನಿರ್ವಹಣೆ ಮಾಡದಿದ್ದ ಪಕ್ಷದಲ್ಲಿ ಪರಿಸರದ ಮೂಲ ಅಂಗಗಳಾದ ಭೂಮಿ, ಜಲ, ವಾಯು ಇವುಗಳ ಮೇಲೆ ಆಗುವ ಗಂಭೀರ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ವಿ.ವಸ್ತçದ. ಕೆನರಾ ವೆಲ್‌ಫೆರ್ ಟ್ರಸ್ಟ್, ಆಡಳಿತಾಧಿಕಾರಿ ರವೀಂದ್ರ ಕೇಣಿ, ಸಂಗಮ ಸೇವಾ ಸಂಸ್ಥೆ (ರಿ) ಬಾಳೆಗುಳಿ, ಅಂಕೋಲಾ ಅಧ್ಯಕ್ಷ ರವೀಂದ್ರ ಎನ್.ಶೆಟ್ಟಿ, ಕೌಟುಂಬಿಕ ಸಲಹಾ ಕೇಂದ್ರದ ಸಲಹೆಗಾರ ತಿಮ್ಮಣ್ಣ ಭಟ್ಟ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.