ಜಿಲ್ಲೆ

ಮುಖ್ಯಮಂತ್ರಿಗೆ ರಾಜೀನಾಮೆ ಸಲ್ಲಿಸಿದ ಕೆ.ಎಸ್​. ಈಶ್ವರಪ್ಪ

Webdesk - Ravikanth

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿ ತೀವ್ರ ಒತ್ತಡಕ್ಕೆ ಸಿಲುಕಿ ರಾಜೀನಾಮೆ ನೀಡಬೇಕಾದ ಅನಿವಾರ್ಯತೆಗೆ ಒಳಗಾಗಿರುವ ಕೆ.ಎಸ್. ಈಶ್ವರಪ್ಪ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು.

ಶಿವಮೊಗ್ಗದಿಂದ ರ‌್ಯಾಲಿ ಮೂಲಕ ಬೆಂಗಳೂರಿನ ಸಿಎಂ ನಿವಾಸಕ್ಕೆ ಆಗಮಿಸಿರುವ ಈಶ್ವರಪ್ಪ, ಅಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು. ಈ ಮಧ್ಯೆ ಸಿಎಂ ನಿವಾಸದ ಬಳಿ ಜಮಾಯಿಸಿದ್ದ ಈಶ್ವರಪ್ಪ ಅಭಿಮಾನಿಗಳು ರಾಜೀನಾಮೆ ನೀಡದಂತೆ ಘೋಷಣೆ ನೀಡಿದ ಪ್ರಸಂಗವೂ ನಡೆಯಿತು.

ಗುತ್ತಿಗೆದಾರ ಸಂತೋಷ್​ ಪಾಟೀಲ್ ಅವರು ಕೆ.ಎಸ್​. ಈಶ್ವರಪ್ಪ ಅವರನ್ನು ಗುರಿಯಾಗಿಸಿ ಉಡುಪಿಯ ಕೆಎಸ್​ಆರ್​​ಟಿಸಿ ಬಸ್​ ನಿಲ್ದಾಣ ಸಮೀಪದ ಶಾಂಭವಿ ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ರಾಜೀನಾಮೆಗೆ ಆಗ್ರಹಿಸಿ ತೀವ್ರ ಒತ್ತಡ ಹೇರಲಾಗಿತ್ತು.