ಜಿಲ್ಲೆ

13ಂದು ಮಕ್ಕಳಿಗೆ ಪ್ರಬಂಧ ಸ್ಪರ್ಧೆ


ಮೈಸೂರು: ಸೇವಾ ಚಿಲುಮೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ನಟ ಡಾ.ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ನ.13ರಂದು ಬೆಳಗ್ಗೆ 11 ಗಂಟೆಗೆ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

ಕೆಸರೆಯ ಶ್ರೀ ಕಾಲಭೈರವೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ಸ್ಪರ್ಧೆ ನಡೆಯಲಿದ್ದು, 9 ವರ್ಷದಿಂದ 16 ವರ್ಷದೊಳಗಿನ ಮಕ್ಕಳ ಭಾಗವಹಿಸಬಹುದು ಎಂದು ಟ್ರಸ್ಟ್‌ನ ಅಧ್ಯಕ್ಷ ಕಾರ್ತಿಕ್ ಮರಿಯಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ನಾಡು-ನುಡಿ ಬಗ್ಗೆ ಪ್ರಬಂಧ ಬರೆಯಬೇಕಾಗಿದೆ. ಸ್ಪರ್ಧೆಗೆ ಈಗಾಗಲೇ 100 ಮಕ್ಕಳು ಹೆಸರು ನೋಂದಾಯಿಸಿದ್ದು, ಒಟ್ಟಾರೆ 200 ಮಕ್ಕಳು ಭಾಗಿಯಾಗುವ ನಿರೀಕ್ಷೆ ಇದೆ. ಸ್ಪರ್ಧೆಯ ಪ್ರಥಮ ಬಹುಮಾನವಾಗಿ 2000 ರೂ., ದ್ವಿತೀಯ 1000 ರೂ. ಹಾಗೂ ತೃತೀಯ 500 ರೂ. ನಗದು ಬಹುಮಾನ ನೀಡಲಾಗುವುದು ಎಂದರು.

ಹೆಚ್ಚಿನ ಮಾಹಿತಿಗೆ ಮೊ.ಸಂ.8431362402ನ್ನು ಸಂಪರ್ಕಿಸಲು ಕೋರಿದರು. ಟ್ರಸ್ಟ್‌ನ ಪದಾಧಿಕಾರಿಗಳಾದ ಮೋಹನ್, ರೋಹಿತ್ರರ, ಅಶ್ರಥ್ ಉಲ್ಲ ಇತರರಿದ್ದರು.