ಹೊಸನಗರ ತಾಲೂಕು ಮಸಗಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿ ಎಚ್.ಪಿ.ರಕ್ಷಿತಾ ಅವರಿಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಪ್ರಶಸ್ತಿ ಪ್ರದಾನ ಮಾಡಿದರು. 
ಜಿಲ್ಲೆ

ಪ್ರಬಂಧ ಸ್ಪರ್ಧೆ: ರಕ್ಷಿತಾ ರಾಜ್ಯಮಟ್ಟಕ್ಕೆ ಆಯ್ಕೆ

ಹೊಸನಗರ: ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಮಸಗಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಚ್.ಪಿ.ರಕ್ಷಿತಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಾರ್ತಾ ಮತ್ತು ಪ್ರಸಾರ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗಾಂಧೀಜಿ ನನಗೇಕೆ ಇಷ್ಟವಾಗುತ್ತಾರೆ? ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಪ್ರಶಸ್ತಿಪತ್ರ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಿದರು.