ಜಿಲ್ಲೆ

ಪೂರಕ ಪರೀಕ್ಷೆಯಲ್ಲೂ ಫೇಲಾಗಿದ್ದರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

Haveri

ಹಾವೇರಿ: ಪೂರಕ ಪರೀಕ್ಷೆಯಲ್ಲೂ ಅನುತ್ತೀರ್ಣನಾದ ಕಾರಣ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಜಿಲ್ಲೆಯ ಹಾನಗಲ್ಲ ತಾಲೂಕಿನ ಬೆಳಗಾಲಪೇಟೆಯಲ್ಲಿ ಸಂಭವಿಸಿದೆ.
ಅಸ್ಕರಅಲಿ ರೇಹಮಾನಸಾಬ ಆಡೂರ (೧೭) ಮೃತ ವಿದ್ಯಾರ್ಥಿ.
ಈತ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೩ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದ. ನಂತರ ಪೂರಕ ಪರೀಕ್ಷೆ ಕಟ್ಟಿ ಬರೆದಿದ್ದ. ಅದರಲ್ಲೂ ಎರಡು ವಿಷಯದಲ್ಲಿ ಅನುತ್ತೀರ್ಣನಾಗಿದ್ದಾನೆ. ಇದರಿಂದ ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.