ಜಿಲ್ಲೆ

ಅರೆಭಾಷಿಕ ವಿದ್ಯಾರ್ಥಿಗಳಿಗಾಗಿ ದತ್ತಿನಿಧಿ ಸ್ಥಾಪನೆ

Manikya M

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ತಮ್ಮ ತಾಯಿ ದಿ.ಜಾನಕಿ ವೆಂಕಟ್ರಮಣ ಗೌಡ ಸ್ಮರಣಾರ್ಥ 1.50 ಲಕ್ಷ ರೂ. ದತ್ತಿನಿಧಿ ಸ್ಥಾಪಿಸಿದ್ದಾರೆ. ಇದರಿಂದ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯ ಪಠ್ಯಕ್ರಮದ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸುವ ಅರೆಭಾಷಿಕ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ತಲಾ ಒಬ್ಬರಿಗೆ ನಗದು ರೂಪದಲ್ಲಿ ಪ್ರೋತ್ಸಾಹಧನ ನೀಡಲಾಗುತ್ತದೆ. ಪ್ರೋತ್ಸಾಹಧನವನ್ನು ವಿಶ್ವ ಮಹಿಳಾ ದಿನಾಚರಣೆಯಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.