ಸುಂಟಿಕೊಪ್ಪ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಧ್ವಜಾರೋಹಣ ನೇರವೇರಿಸಿದರು. ಟಿ.ಕೆ.ಸಾಯಿಕುಮಾರ್, ಶಿವಮ್ಮ ಮಹೇಶ್, ಪಿ.ಎಫ್.ಸಬಾಸ್ಟೀನ್, ಶಬ್ಬೀರ್, ರಫೀಕ್‌ಖಾನ್, ಮಂಜುನಾಥ್, ವಸಂತಿ ಇತರರಿದ್ದರು. 
ಜಿಲ್ಲೆ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಸಿಗಲಿದೆ

ಸುಂಟಿಕೊಪ್ಪ: ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ರಾಜ್ಯ ಅಥವಾ ರಾಷ್ಟ್ರ ಮಟ್ಟದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ಭಾರತದ ಸಂವಿಧಾನ ನೀಡಿರುವುದು ನಮ್ಮ ಸಂವಿಧಾನದ ಹೆಗ್ಗಳಿಕೆಯಾಗಿದೆ ಎಂದು ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿ, ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ನಮ್ಮ ದೇಶದ ಸಂವಿಧಾನ ಒಂದಾಗಿದೆ. ಸುಂಟಿಕೊಪ್ಪ ವಿವಿಧ ಜನಾಂಗಗಳು ಆನೇಕತೆಯಲ್ಲಿ ಏಕಾತೆ ಮತ್ತು ಸರ್ವಜನಾಂಗದ ಶಾಂತಿಯ ತೋಟವಾಗಿ ಬಾಳುತ್ತಿದ್ದಾರೆ. ಇದು ಸಂವಿಧಾನಕ್ಕೆ ಅತ್ಯುತ್ತಮ ಉದಾಹರಣೆ ಎಂದರು.

ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಲಾಯಿತು. ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಧ್ವಜಾರೋಹಣ ನೇರವೇರಿಸಿದರು. ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.

ಪುಟಾಣಿ ವಿದ್ಯಾರ್ಥಿಗಳ ಭಾರತಾಂಬೆಗೆ ನಮನ ಸಲ್ಲಿಸುವ ಅಂಗಸಾಧನೆಯ ನೃತ್ಯ ಜನಮನ ರಂಜಿಸಿತು. ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ವಿವಿಧ ಶಾಲೆಗಳ ಮಕ್ಕಳು ನೆರೆದಿದ್ದವರನ್ನು ರಂಜಿಸಿದರು.

ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು ಹಾಗೂ ಪಂಚಾಯಿತಿ ಸಿಬ್ಬಂದಿ ಮತ್ತು ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಗ್ರಾಪಂ ಉಪಾಧ್ಯಕ್ಷ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್.ಸಬಾಸ್ಟೀನ್, ಶಬ್ಬೀರ್, ರಫೀಕ್‌ಖಾನ್, ಮಂಜುನಾಥ್, ವಸಂತಿ, ಶಾಂತಿ, ನಾಗರತ್ನಾ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಕಾರ್ಯದರ್ಶಿ ರಹೆನಾ ಫೈರೋಜ್, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಸೆಲ್ವರಾಜ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಗೀತಾ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಾಲಕೃಷ್ಣ, ಪಂಚಾಯಿತಿ ಲೆಕ್ಕ ಪರಿಶೋಧಕಿ ಚಂದ್ರಕಲಾ, ಸಿಬ್ಬಂದಿ ಸಂಧ್ಯಾ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪದಾಧಿಕಾರಿಗಳು, ಸ್ತ್ರೀಶಕ್ತಿ ಸಂಘದ ಸದಸ್ಯರು ಇದ್ದರು.