ಜಿಲ್ಲೆ

ಪ್ರತಿ ಹಳ್ಳಿ, ಮನೆಗೆ ತಲುಪಬೇಕು

Davangere - Desk - Mahesh Babu E

ಹೊಳಲ್ಕೆರೆ: ದೇಶದ ಜನರ ಆರೋಗ್ಯ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಪ್ರತಿ, ಹಳ್ಳಿಗಳಲ್ಲಿ ಜನಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಹೊಣೆಗಾರಿಕೆ ಹೆಚ್ಚು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭವ ಕಾರ್ಡ್ ವಿತರಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು, ಜನೌಷಧ ಮಳಿಗೆ ಸೇರಿ ಅನೇಕ ಆರೋಗ್ಯ ಸೇವೆ ಆರಂಭಿಸಿದ್ದಾರೆ. ಅವುಗಳನ್ನು ಜನರಿಗೆ ತಲುಪಿಸುವ ಕೆಲಸ ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯರು ಮಾಡಬೇಕು ಎಂದು ಸೂಚಿಸಿದರು.

ತಹಸೀಲ್ದಾರ್ ಬೀಬಿ ಫಾತಿಮಾ, ತಾಲೂಕು ಆರೋಗ್ಯಾಧಿಕಾರಿ ಡಾ.ರೇಖಾ, ಡಾ.ವಿನಯ್, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಸಮಾಜ ಕಲ್ಯಾಣಾಧಿಕಾರಿ ಕುಮಾರಸ್ವಾಮಿ, ಕಾಂತರಾಜ್, ಗೀತಾ ಇದ್ದರು.