ಕುಂದಾಪುರ: ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ ನೀಡಿದ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಿ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ವಾಡಬೇಕು. ಗೀತೆಯ ಸಾರ ನಮ್ಮ ಜೀವನಕ್ಕೆ ಅತ್ಯವಶ್ಯಕವಾಗಿದೆ. ಮಕ್ಕಳು ನಮ್ಮನ್ನು ಅನುಕರಣೆ ವಾಡುತ್ತಾರೆ, ನೋಡಿ ಕಲಿಯುತ್ತಾರೆ. ಆದ್ದರಿಂದ ಹಿರಿಯರು ಉತ್ತಮ ಸಂಸ್ಕಾರಗಳನ್ನು ಮಕ್ಕಳಿಗೆ ನೀಡಬೇಕು ಎಂದು ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥೆ ಕಲ್ಪನಾ ಭಾಸ್ಕರ ಹೇಳಿದರು.
ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ವತಿಯಿಂದ ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಜೆಸಿಐ ಗಂಗೊಳ್ಳಿ ಸಹಯೋಗದೊಂದಿಗೆ ಗಂಗೊಳ್ಳಿಯ ಶ್ರೀ ವೀರವಿಠಲ ಸಭಾಗೃಹದಲ್ಲಿ ಶನಿವಾರ ನಡೆದ 39ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೆನರಾ ಬ್ಯಾಂಕಿನ ನಿವೃತ್ತ ಡಿಜಿಎಂ ರತ್ನಾಕರ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಮತ್ತು ಜೆಸಿಐ ಗಂಗೊಳ್ಳಿ ಅಧ್ಯಕ್ಷ ರೋಶನ್ ಖಾರ್ವಿ ಶುಭ ಹಾರೈಸಿದರು.
ಶಿಶು ಮಂದಿರ ಸದಸ್ಯರಾದ ಶ್ರೀನಿವಾಸ ಎಂ., ಸವಿತಾ ಯು.ದೇವಾಡಿಗ, ವಿಜಯಶ್ರೀ ವಿ.ಆಚಾರ್ಯ, ವಸಂತಿ ಖಾರ್ವಿ, ವಾತಾಜಿ ಪ್ರೇವಾ, ಸಹಾಯಕಿ ರತ್ನ ಉಪಸ್ಥಿತರಿದ್ದರು.
ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಸಿದರು. ಶಿಶು ಮಂದಿರ ಅಧ್ಯಕ್ಷ ಬಿ.ರಾವೇಂದ್ರ ಪೈ ಸ್ವಾಗತಿಸಿ, ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು. ಬಿ.ಲಕ್ಷ್ಮೀಕಾಂತ ಮಡಿವಾಳ ನಿರೂಪಿಸಿದರು.