ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ
ಸಹಕಾರ ವರ್ಷಾಚರಣೆ ಒಂದು ಪ್ರಮುಖ ಕಾರ್ಯಕ್ರಮವಾಗಿದ್ದು, ಸವಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಗಿಡ ನೆಡುವ ಹಾಗೂ ಹಸಿರು ಪರಿಸರ ನಿರ್ಮಿಸುವತ್ತ ಶ್ರಮವಹಿಸಬೇಕು. ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪೋಷಿಸಿ, ಪರಿಸರ ಸಂರಕ್ಷಿಸುವ ಕಾರ್ಯವಾಗಬೇಕು ಎಂದು ನಿರ್ದೇಶಕ ಶುಭಕರ ಶೆಟ್ಟಿ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಸಹಕಾರ ಇಲಾಖೆ, ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂದ ವತಿಯಿಂದ ಹಿಲಿಯಾಣ ಶಾಖೆಯಲ್ಲಿ ನಡೆದ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಕಾರ್ಯಕ್ರಮದಲ್ಲಿ ಗ್ರಾಹಕರಿಗೆ ಗಿಡ ವಿತರಿಸಿ ವಾತನಾಡಿದರು.
ನಿರ್ದೇಶಕಿ ಡಾ.ಸುನಿತಾ ಶೆಟ್ಟಿ ವಾತನಾಡಿ, ಸಹಕಾರ ಸಂಸ್ಥೆಗಳು ಗ್ರಾಹಕರಿಗಾಗಿ ಹಲವಾರು ಕಾರ್ಯಕ್ರಮ ಆಯೋಜಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದರು.
ಏಕ್ ಪೇಡ್ ವಾ ಕೆ ನಾಮ್ ಎಂಬ ಕಾರ್ಯಕ್ರಮದಡಿ ಗ್ರಾಮ ಪಂಚಾಯಿತಿ ವಾಜಿ ಅಧ್ಯಕ್ಷ ಪ್ರಮೋದ್ ಹೆಗ್ಡೆ ಹಾಗೂ ಆವರ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿವಾಕರ ಗಾಣಿಗ ಸಸಿ ನೆಟ್ಟರು.
ನಿರ್ದೇಶಕಿ ಡಾ.ಸುನೀತಾ ಶೆಟ್ಟಿ, ಮಂಜುನಾಥ ಹೆಗ್ಡೆ ಆವರ್ಸೆ, ಚಂದ್ರ ಪೂಜಾರಿ ಆವರ್ಸೆ, ಉಪಾಧ್ಯಕ್ಷರಾದ ಪ್ರವೀಣ ಶೆಟ್ಟಿ ವಂಡಾರು, ಶಮೀನಾ ಬಾನು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಭಿಷೇಕ್ ಶೆಟ್ಟಿ, ವಾಜಿ ನಿರ್ದೇಶಕ ಮಂಜುನಾಥ ನಾಯ್ಕ, ಸಮದ್ ಸಾಹೇಬ್ ಮತ್ತಿತರರು ಉಪಸ್ಥಿತರಿದ್ದರು. ಹಿಲಿಯಾಣ ಶಾಖೆಯ ಹಿರಿಯ ಸಹಾಯಕ ದಿನೇಶ್ ಆಚಾರ್ಯ ಸ್ವಾಗತಿಸಿದರು. ಶಾಖಾಧಿಕಾರಿ ಶಂಕರ ಪೂಜಾರಿ ನಿರೂಪಿಸಿ, ವಂದಿಸಿದರು.