ಗೋಕಾಕ: ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಡಲು ಸಹಕರಿಸಬೇಕು. ಮರ ಗಿಡಗಳನ್ನು ಬೆಳೆಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ತಾಲೂಕಿನ ಕೊಣ್ಣೂರು ಪಟ್ಟಣದ ಶ್ರೀ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಪುರಸಭೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಚ್ಛತೆಗೆ ಸಾರ್ವಜನಿಕರು ನಗರಸಭೆ ಮತ್ತು ಗ್ರಾಮ ಪಂಚಾಯಿತಿಗಳ ಜತೆ ಕೈಜೋಡಿಸಬೇಕು. ಕಸವನ್ನು ಎಲ್ಲೂ ಬಿಸಾಡದೆ ಸಂಗ್ರಹಿಸುವ ವಾಹನಗಳಲ್ಲಿ ಹಾಕಬೇಕು. ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದರು.
ಚುನಾವಣಾ ಆಯೋಗದಿಂದ ಶತಮಾನ ಪೂರೈಸಿರುವ ಶತಾಯುಷಿಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಚುನಾವಣಾ ಇಲಾಖೆ ಅಧಿಕಾರಿಗಳು ಸನ್ಮಾನಿಸಿದರು. ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ, ಪುರಸಭೆ ಸದಸ್ಯರಾದ ಪ್ರಕಾಶ ಕರನಿಂಗ, ಅಶೋಕ ಕುಮಾರನಾಯ್ಕ, ವಿನೋದ ಕರನಿಂಗ, ಧನ್ಯಕುಮಾರ ಮೇಗೆರಿ, ಸಚಿನ ಸಮಯ, ಬಿ.ಡಿ.ಕುಮರೇಶಿ ಇತರರಿದ್ದರು.