ಜಿಲ್ಲೆ

ಬಸವರಾಜ ಪಾಟೀಲ್​ ಪುಣ್ಯಸ್ಮರಣೆ ಆ.10ಕ್ಕೆ

ರಮೇಶ ಮೇಳಕುಂದಾ

ಹುಮನಾಬಾದ್: ಮಾಜಿ ಸಚಿವ ಬಸವರಾಜ ಪಾಟೀಲ್ ಹುಮನಾಬಾದ್ ಅವರ ೭ನೇ ಪುಣ್ಯಸ್ಮರಣೆ ಕಾರ್ಯಕ್ರಮ ಪಟ್ಟಣದ ಬಸವರಾಜ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಆ.10ರಂದು ಬೆಳಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ. ಪಾಟೀಲ್ ಅಭಿಮಾನಿಗಳು, ಹಿತೈಷಿಗಳು, ಸಾರ್ವಜನಿಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಉದ್ಯಮಿ ಸೋಮಶೇಖರ ಪಾಟೀಲ್, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್ ಸೇರಿದಂತೆ ಅವರ ಅಭಿಮಾನಿಗಳು ಕೋರಿದ್ದಾರೆ.