ಜಿಲ್ಲೆ

ಸುಳ್ಳು ಆರೋಪ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಪಣೋಲಿಬೈಲು ಕ್ಷೇತ್ರದಲ್ಲಿ ರಮಾನಾಥ ರೈ ಪ್ರಾರ್ಥನೆ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಭಾನುವಾರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ, ತಮ್ಮ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ತಾಯಿ ಕಲ್ಲುರ್ಟಿ ಕಠಿಣ ಶಿಕ್ಷೆ ನೀಡಬೇಕೆಂದು ಪ್ರಾರ್ಥಿಸಿದರು.

ನಾಲ್ಕು ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ಶರತ್ ಮಡಿವಾಳ ಎಂಬುವರ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಈ ಸಂದರ್ಭ ಶರತ್ ಮಡಿವಾಳ ಅವರ ತಂದೆಯವರು ಶರತ್ ಹತ್ಯೆಯಲ್ಲಿ ರಮಾನಾಥ ರೈ ಶಾಮೀಲಾಗಿದ್ದಾರೆ ಎಂಬ ಆರೋಪ ಮಾಡಿದ್ದರು. ಇದರಿಂದಾಗಿ ತನ್ನ ಮನಸ್ಸಿಗೆ ಅಘಾತವಾಗಿದೆ. ಇದೊಂದು ರಾಜಕೀಯ ಪ್ರೇರಿತ ಮತ್ತು ಪ್ರಕರಣ ವಿಚಾರಣೆ ನಡೆಯುತ್ತಿರುವ ಹಂತದಲ್ಲಿ ಜನರ ದಿಕ್ಕನ್ನು ತಪ್ಪಿಸುವ ಆರೋಪ. ಈ ಹಿನ್ನೆಲೆಯಲ್ಲಿ ತಾನು ಅಮ್ಮನವರ ಮುಂದೆ ಶರತ್ ಮಡಿವಾಳರ ಹತ್ಯೆಯಲ್ಲಿ ತನ್ನ ಕೈವಾಡ ಇದ್ದರೆ ತನಗೂ ಶಿಕ್ಷೆಯಾಗಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು.