ಉತ್ತರಕನ್ನಡ: ಕುಮಟಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಪಿ. ಕರ್ಕಿ ಇಂದು ನಿಧನರಾದರು. ಅವರಿಗೆ ಎಂಬತ್ತಾರು ವರ್ಷ ವಯಸ್ಸಾಗಿತ್ತು.
ಉತ್ತರಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಿಂದ 1983 ಹಾಗೂ 1994ರಲ್ಲಿ ಒಟ್ಟು ಎರಡು ಬಾರಿ ಅವರು ಶಾಸಕರಾಗಿ ಆಯ್ಕೆ ಆಗಿದ್ದರು.
ಜನಸಂಘದ ಕಾಲದಿಂದಲೂ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ ಅವರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಾಗಿ, ಸುದೀರ್ಘ ಕಾಲ ಬಿಜೆಪಿ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಅವರು ಪತ್ನಿ, ಪುತ್ರಿ, ಪುತ್ರ ಮತ್ತು ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಡಾ.ಎಂ.ಪಿ. ಕರ್ಕಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.