ಜಿಲ್ಲೆ

ಪರೀಕ್ಷೆ ಮುಂದೂಡಿಕೆ

ದತ್ತಾತ್ರೇಯ ಪಿ ಕುಲಕರ್ಣಿ

ಬಾಗಲಕೋಟೆ: ಪ್ರಸಕ್ತ ಸಾಲಿನ ಜೂನ್ ತಿಂಗಳಲ್ಲಿ ನಡೆಯುವ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಸರ್ಕಾರಿ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆಸುವ ಲಿಖಿತ ಪರೀಕ್ಷೆಯನ್ನು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧಿಸೂಚನೆ ಮೇರೆಗೆ ಮುಂದೂಡಿದ್ದು, ಜೂ. 15 ರಿಂದ 17ರವರೆಗೆ ನಡೆಸಲಾಗುವುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.