ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ ವಿದ್ಯಾಸಾಗರ್ ಕ್ಯಾಂಪಸ್‌ನಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಗುಲಾಬಿ ಹೂ ನೀಡಿ, ಬ್ಯಾಂಡ್ ಸೆಟ್, ಗೊಂಬೆಗಳ ಮೂಲಕ ಆಕರ್ಷಕವಾಗಿ ಶಿಕ್ಷಕರು ಬರಮಾಡಿಕೊಂಡರು.
ಎಕ್ಸೆಲ್ ವಿದ್ಯಾಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ, ಸಂಸ್ಕಾರಯುತ ಗುಣಮಟ್ಟದ ಶಿಕ್ಷಣದೊಂದಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸಲಾಗುವುದು ಎಂದರು.
ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ, ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲ ಡಾ.ಪ್ರಜ್ವಲ್, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಎಒ ಕೀರ್ತಿನಿಧಿ ಜೈನ್, ಎಕ್ಸೆಲ್ ವೇಣೂರು ಪ್ರೌಢಶಾಲಾ ಮುಖ್ಯಶಿಕ್ಷಕಿ ಸುಜಾತಾ ಬಿ.ಗುರುವಾಯನಕೆರೆ ಉಪಸ್ಥಿತರಿದ್ದರು.
ಎಕ್ಸೆಲ್ ಮುಖ್ಯ ಶಿಕ್ಷಕಿ ಲೀನಾ ಫ್ಲೋರಿನಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ನಂತರ ನರ್ಸರಿ, ಎಲ್‌ಕೆಜಿ, ಯುಕೆಜಿ, 1ನೇ ತರಗತಿಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.