ಸಿಂಧನೂರು: ನಗರದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಿಯು ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.
ಕಬಡ್ಡಿಯಲ್ಲಿ ಬಾಲಕರು ರೋಚಕ ಜಯಸಾಧಿಸಿ ಪ್ರಥಮ ಸ್ಥಾನ ಪಡೆದರು. ಅದೇ ರೀತಿ ಥೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಬಾಲಕಿಯರು ಹಾಗೂ ಬಾಲಕರ ಖೋಖೋ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವೈಯಕ್ತಿಕ ಆಟ 3 ಸಾವಿರ ಮೀಟರ್ ಓಟದಲ್ಲಿ ಪ್ರಜ್ವಲ್ (ಪ್ರಥಮ), 5 ಸಾವಿರ ಮೀ. ಓಟದಲ್ಲಿ ವಿಜಯ (ಪ್ರಥಮ) ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಕಾಲೇಜಿನ ಪ್ರಾಚಾರ್ಯ ಮಂಜುನಾಥ್ ಸೋಮಲಾಪುರ ತಿಳಿಸಿದ್ದಾರೆ.