ಬೀದರ್: ಇಲ್ಲಿನ ಬಸವಕಲ್ಯಾಣ ನಗರದಲ್ಲಿ ಅಬಕಾರಿ ಮಹಿಳಾ ಪಿಎಸ್ಐ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿಎಸ್ಐ ರೇಖಾ ಕೋರಿ (29) ಮೃತರು. ಎಂಟು ತಿಂಗಳಿಂದ ಬಸವಕಲ್ಯಾಣದಲ್ಲಿ ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇವರು ಮೂಲತಃ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದವರು ಎನ್ನಲಾಗಿದೆ.
ಪತಿ ಹಾಗೂ ಕುಟುಂಬ ಸದಸ್ಯರೊಂದಿಗೆ ಬಸವಕಲ್ಯಾಣದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಮನೆಯಿಂದ ಪತಿ ಹೊರಗೆ ಹೋದ ಸಂದರ್ಭದಲ್ಲಿ ಫ್ಯಾನ್ಗೆ ನೇಣುಬಿಗಿದುಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ. ಮಾರ್ಗಮಧ್ಯದಲ್ಲೇ ಮೃತರಾಗಿದ್ದಾರೆ.
ಬಸವಕಲ್ಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.