ಉಡುಪಿ: ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ಮಾ.7 ರಿಂದ 9 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 8.30 ರವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ "ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮಾರುಕಟ್ಟೆ ಮತ್ತು ವಿನ್ಯಾಸ ವಿಭಾಗ ವ್ಯವಸ್ಥಾಪಕಿ ಪದ್ಮಶ್ರೀ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಾ.7 ರಂದು ಮಧ್ಯಾಹ್ನ 12.30ಕ್ಕೆ ಉಡುಪಿಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥರು ಚಾಲನೆ ನೀಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಲಕ್ಷಿ$್ಮನಾರಾಯಣ ಕಾರಂತ್ ಉಪಸ್ಥಿತರಿರಲಿದ್ದಾರೆ. ಚರಕದ ಅಧ್ಯಕ್ಷೆ ಮಹಾಲಕ್ಷಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮೇಳದಲ್ಲಿ 10 ಮಳಿಗೆಗಳು ಪ್ರದರ್ಶನಕ್ಕಿವೆ. ಚರಕದ ನೈಸರ್ಗಿಕ ಬಣ್ಣದ ಕೈ ಮಗ್ಗದ ಬಟ್ಟೆಗಳು, ಸಿದ್ದುಉಡುಪುಗಳು, ಅಖಿಲ ಭಾರತ ಕೈಮಗ್ಗ ಸಂಘಟನೆಗಳ ಒಕ್ಕೂಟದ ಉತ್ತರ ಕರ್ನಾಟಕ ಭಾಗದ ಅಪರೂಪದ ಸೀರೆಗಳಾದ ಗಾಡಿ ದಡಿ, ಗೋಮಿ ದಡಿ, ಚುಕ್ಕಿ ಪರಸ್, ತೊಡೆ ಪರಸ್, ಕಿನ್ನಾಳ ಸೀರೆಗಳು, ಟವೆಲ್ಸ್, ಬೆಡ್ಶೀಟ್ಗಳು, ನೇಕಾರರೇ ನೇಯ್ದ ಬೆಂಗಳೂರಿನ ವಿಶುದ್ದಿಯ ರೇಷ್ಮೆ ಸೀರೆಗಳು, ಟೆರಾಬಾನ್ ಅವರ ಕರಕುಶಲ ಟೆರಾಕೋಟಾ ಮತ್ತು ಮೆಟಲ್ ಆಭರಣಗಳು, ಶಿರಸಿಯ ಚೇತನಾ ಸಂಸ್ಥೆಯ ಬಾಳೆನಾರಿನ ಉತ್ಪನ್ನಗಳು "ಮರಳಿ ಮಣ್ಣಿಗೆ"ಯವರ ಮಡಿಕೆ-ಕುಡಿಕೆಗಳು, ಸಾವಯವ ಉತ್ಪನ್ನಗಳು, ಸಿರಿಧಾನ್ಯದಿಂದ ತಯಾರಿಸಿದ ವೈವಿಧ್ಯಮಯ ಆಹಾರ ಉತ್ಪನ್ನಗಳು, ನೈಸರ್ಗಿಕ ಪದಾರ್ಥಗಳಿಂದ ತಯಾರಿಸಿದ ಸೌಂದರ್ಯವರ್ಧಕಗಳು, ಕಾರ್ಕಳದ ತಪಸ್ ಫುಡ್ಸ್ ಮಖಾನ ಉತ್ಪನ್ನಗಳು, ಪುಸ್ತಕ ಮಳಿಗೆಗಳಿವೆ ಎಂದರು.
ಪ್ರಸ್ತುತ ಸ್ಥಳಿಯವಾಗಿ ಸುಮಾರು 350 ಜನ ಹಾಗೂ ರಾಜ್ಯದ ಬೇರೆ, ಬೇರೆ ಜಿಲ್ಲೆಗಳ 400 ಜನ ನೇಕಾರರಿಗೆ ಸೇರಿ ಒಟ್ಟು 750 ಜನರಿಗೆ ಉದ್ಯೋಗ ನೀಡಲಾಗಿದೆ. ನಮ್ಮ ಉತ್ಪಾದನೆಯ ಪ್ರತಿ ಹಂತದಲ್ಲೂ ಪರಿಸರಕ್ಕೆ ಪೂರಕವಾದ ವಾತಾವರಣ ನಿರ್ಮಿಸಿಕೊಂಡಿದ್ದೇವೆ. ನೇಕಾರಿಕೆಗೆ ಉತ್ತೇಜನ, ಕೈಮಗ್ಗ ಬಟ್ಟೆ ಬಳಕೆ ಹಾಗೂ ನೈಸರ್ಗಿಕ ಬಣ್ಣ ಉಪಯೋಗ- ಸಂಸ್ಥೆಯ ಮುಖ್ಯ ಉದ್ದೇಶ ಎಂದರು. ಸುದ್ದಿಗೋಷ್ಠಿಯಲ್ಲಿ ಚರಕದ ಅಧ್ಯಕ್ಷೆ ಮಹಾಲಕ್ಷಿ$್ಮ, ಮುಖ್ಯಕಾರ್ಯನಿರ್ವಹಣಾಧಿಕಾರಿ ಪೀಟರ್ ಉಪಸ್ಥಿತರಿದ್ದರು.