ಜಿಲ್ಲೆ

ವಿಶ್ವ ವಿಖ್ಯಾತ ವಿಜ್ಞಾನಿಗಳ ಚಿತ್ರಕಲಾ ಪ್ರದರ್ಶನ

ಮೈಸೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮೈಸೂರು ಜಿಲ್ಲಾ ಸಮಿತಿ, ಮೈಸೂರು ಸೈನ್ಸ್ ಫೌಂಡೇಷನ್ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಕಲಾಮಂದಿರದ ಸುಚಿತ್ರ ಕಲಾ ಗ್ಯಾಲರಿಯಲ್ಲಿ ಭಾನುವಾರ ಕಲಾವಿದ ಯು.ಜಿ.ಮೋಹನ್‌ಕುಮಾರ್ ಆರಾಧ್ಯ ರಚಿಸಿರುವ ವಿಶ್ವ ವಿಖ್ಯಾತ ವಿಜ್ಞಾನಿಗಳ ಚಿತ್ರಕಲಾ ಪ್ರದರ್ಶನ ನೆರವೇರಿತು.

ನೊಬೆಲ್ ಪ್ರಶಸ್ತಿ ಹಾಗೂ ಅಪಾರ ಸಾಧನೆ ಗೈದ ಹತ್ತಾರು ವಿಜ್ಞಾನಿಗಳ ಭಾವಚಿತ್ರವನ್ನು ಹಾಗೂ ಅವರ ಸಾಧನೆ ವಿವರಗಳನ್ನು ಪ್ರದರ್ಶನ ಮಾಡಲಾಯಿತು.

ನಿವೃತ್ತ ವಿಜ್ಞಾನಿ ಡಾ.ಟಿ.ತಿಪ್ಪೇಸ್ವಾಮಿ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜ್ಞಾನ ಚಿತ್ರಕಲೆ ಪ್ರದರ್ಶನವು,ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬಿತ್ತುತ್ತದೆ ಎಂದರು.

ಮೈಸೂರು ಸೈನ್ಸ್ ಫೌಂಡೇಷನ್ ಅಧ್ಯಕ್ಷ ಸಿ.ಕೃಷ್ಣೇಗೌಡ, ಕಾರ್ಯದರ್ಶಿ ಜಿ.ಬಿ.ಸಂತೋಷ್ ಕುಮಾರ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮೈಸೂರು ಜಿಲ್ಲಾ ಸಮಿತಿಯ ಸಹ ಕಾರ್ಯದರ್ಶಿ ಎಚ್.ವಿ.ಮುರುಳಿಧರ ಇದ್ದರು.