ಜಿಲ್ಲೆ

ಪ್ರತಾಪ್‌ಸಿಂಹ ಸಂಸತ್ ಸದಸ್ಯತ್ವ ರದ್ದುಪಡಿಸಲು ಆಗ್ರಹ

ಮೈಸೂರು: ಸಂಸತ್‌ನಲ್ಲಿ ದಾಳಿ ಮಾಡಿದವರಿಗೆ ಪಾಸ್ ನೀಡಿದ್ದ ಪ್ರತಾಪ್ ಸಿಂಹ ಅವರ ಸಂಸತ್ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ದಲಿತ ಪ್ಯಾಂಥರ್ಸ್‌ ಮುಖಂಡ ಗಿರಿಯಣ್ಣ ಅವರು ಲೋಕಸಭಾಧ್ಯಕ್ಷರನ್ನು ಆಗ್ರಹಿಸಿದರು.
ಪಾಸ್ ನೀಡಿದ ಬಗ್ಗೆ ಸಂಸದ ಇದುವರೆಗೂ ಉತ್ತರ ನೀಡದಿರುವುದು ಬೇಸರದ ಸಂಗತಿಯಾಗಿದೆ. ಒಂದು ವೇಳೆ ಮುಸ್ಲಿಂ ಸಮುದಾಯದವರು ಈ ರೀತಿ ಮಾಡಿದ್ದಲ್ಲಿ ಏನು ಮಾಡುತ್ತಿದ್ದರು ಎನ್ನುವುದನ್ನು ಊಹಿಸಲೂ ಕಷ್ಟವಾಗುತ್ತಿತ್ತು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಸಂಸದರ ಕಚೇರಿ ವಶಕ್ಕೆ ಪಡೆದು ನ್ಯಾಯಯುತ ತನಿಖೆ ನಡೆಸಬೇಕು. ಕೇಂದ್ರ ಗೃಹ ಸಚಿವ ಅಮಿತ್ ಷಾ ಇದರ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮಾತನಾಡಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಡಾ.ಚೆನ್ನಕೇಶವ, ಕಿರಣ್‌ಕುಮಾರ್, ಮೋಹನ್, ಸಂತೋಷ್, ಚೇತನ್ ಕಾಂತರಾಜು ಇದ್ದರು.