ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ದುಷ್ಕರ್ಮಿಗಳನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಶಂಕರಗೌಡಗೆ ಭೀಮ್ ಆರ್ಮಿಯಿಂದ ಶನಿವಾರ ಮನವಿ ಸಲ್ಲಿಸಲಾಯಿತು. ಸಂಘಟನೆ ಅಧ್ಯಕ್ಷ ಪ್ರವೀಣಕುಮಾರ, ಪದಾಕಾರಿಗಳಾದ ಖಾಜಾ ಅಸ್ಲಂ ಅಹ್ಮದ್, ಸಿ.ದೀಪಕ್ ಭಂಡಾರಿ, ಬಾಬಾ ಖಾನ್, ರಾಕೇಶಕುಮಾರ, ರವಿತೇಜ, ಸಿದ್ಧಾರ್ಥ ಇದ್ದರು. 
ಜಿಲ್ಲೆ

ಅಂಬೇಡ್ಕರ್ ಅಪಮಾನ ಮಾಡಿದವರನ್ನು ಗಡಿಪಾರು ಮಾಡಿ

ರಾಚಯ್ಯ ಸ್ವಾಮಿ

ರಾಯಚೂರು: ಕಲಬುರಗಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಭೀಮ್ ಆರ್ಮಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಶಂಕರಗೌಡಗೆ ಮನವಿ ಸಲ್ಲಿಸಿ, ಅಂಬೇಡ್ಕರ್ ಪುತ್ಥಳಿಗೆ ಚಪ್ಪಳಿ ಹಾರ ಹಾಕಿ ಅಪಮಾನ ಮಾಡಿದ ದುಷ್ಕರ್ಮಿಗಳ ಕೃತ್ಯ ಕ್ಷಮೆಗೆ ಅರ್ಹವಾಗಿದ್ದಲ್ಲ. ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆ ಜರುಗದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಸಹ ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು. ಇಂತಹ ದುಷ್ಕೃತ್ಯಗಳ ಮೂಲಕ ಸಮಾಜದಲ್ಲಿ ವಿಷ ಬೀಜ ಬಿತ್ತುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದಕ್ಕೂ ಮುಂಚೆ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಲು ಪ್ರಯತ್ನಿಸಿದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ನಂತರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಜಿಲ್ಲಾಕಾರಿ ಕಚೇರಿಗೆ ಆಗಮಿಸಲಾಯಿತು.
ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಪ್ರವೀಣಕುಮಾರ, ಪದಾಕಾರಿಗಳಾದ ಖಾಜಾ ಅಸ್ಲಂ ಅಹ್ಮದ್, ಸಿ.ದೀಪಕ್ ಭಂಡಾರಿ, ಬಾಬಾ ಖಾನ್, ರಾಕೇಶಕುಮಾರ, ರವಿತೇಜ, ಸಿದ್ಧಾರ್ಥ ಪಾಲ್ಗೊಂಡಿದ್ದರು.