ಮಂಡ್ಯ: ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಮಾಹಿತಿಯಂತೆ ಜೂ.19ರಿಂದ 23ರವರೆಗೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದ ಜತೆಗೆ ತುಂತುರುವಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
19ರಂದು 12 ಮಿ.ಮೀ, 20ರಂದು 4 ಮಿ.ಮೀ, 21ರಂದು 2 ಮಿ.ಮೀ, 22ರಂದು 10 ಮಿ.ಮೀ ಹಾಗೂ 23ರಂದು 16 ಮಿ.ಮೀ ಮಳೆಯಾಗಬಹುದು. ಈ ಅವಧಿಯಲ್ಲಿ ಗರಿಷ್ಟ 30.4 ರಿಂದ 34.3 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ 17.6 ರಿಂದ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಗಾಳಿ ಪ್ರತಿ ಗಂಟೆಗೆ 17 ರಿಂದ 19 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ವರದಿ ನೀಡಿದೆ.