ಮಂಡ್ಯ: ಜಿಲ್ಲೆಯಲ್ಲಿ ಜು.26ರಿಂದ 30ರವರೆಗೆ ಮೋಡ ಕವಿದ ವಾತಾವರಣದ ಜತೆಗೆ ಸಾಧಾರಣ ಮಳೆಯಾಗಲಿದೆ. ಅಂತೆಯೇ ಜು.28ರಿಂದ ಆ.3ರವರೆಗೆ ದೀರ್ಘಾವಧಿ ಮುನ್ಸೂಚನೆ ಪ್ರಕಾರ ಸರಾಸರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಟ 30 ಡಿಗ್ರಿ ಹಾಗೂ ಕನಿಷ್ಟ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಗಾಳಿ ಪ್ರತಿ ಗಂಟೆಗೆ 3 ರಿಂದ 4 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಹಾಗೂ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮಂಗಳವಾರ ವಿವಿಧೆಡೆ ಜೋರು ಮಳೆಯಾಗಿದೆ. ಮಂಡ್ಯ ನಗರ ಸೇರಿದಂತೆ ಮದ್ದೂರು, ಶ್ರೀರಂಗಪಟ್ಟಣ, ನಾಗಮಂಗಲ, ಶ್ರೀರಂಗಪಟ್ಟಣ ಸೇರಿದಂತೆ ಬಹುತೇಕ ಕಡೆ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಅಂತೆಯೇ ಬಿಟ್ಟುಬಿಡದೇ ತುಂತುರು ಹಾಗೂ ಆಗಿಂದ್ದಾಗೆ ಜೋರು ಮಳೆ ಬಂತು. ಮಳೆಯಿಂದಾಗಿ ದಿನನಿತ್ಯಕ್ಕೆ ಕೆಲಸಕ್ಕಾಗಿ ಸಾರ್ವಜನಿಕರು ಪರದಾಡುವಂತಾಯಿತು.