ಜಿಲ್ಲೆ

ಸಚಿವ ಸ್ಥಾನ ಸಿಗುವ ನಿರೀಕ್ಷೆ !

 ಮಾಗಡಿ : ಹೈಕಮಾಂಡ್ ತೀರ್ಮಾನಿಸಿದರೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ತಾಲೂಕಿನ ಐಯ್ಯಂಡಹಳ್ಳಿದಲ್ಲಿ ಗ್ರಾಮಸ್ಥರ ಕುಂದುಕೊರತೆ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿಎಂ ವಿಚಾರದ ಬಗ್ಗೆ ಹೈಕಮಾಂಡ್ ಕುಳಿತು ಚರ್ಚೆ ಮಾಡಲಿದೆ. ಸಚಿವ ಸಂಪುಟ ವಿಸ್ತರಣೆ ಆರು ತಿಂಗಳು ಮುಂದಕ್ಕೆ ಹೋಗಬಹುದು. ನಾನು 5 ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನ ಈ ಬಾರಿ ಒಲಿಯಲಿದೆ, ಸಚಿವ ಸ್ಥಾನ ನಿರ್ವಹಿಸುವ ಎಲ್ಲ ಅರ್ಹತೆ, ಯೋಗ್ಯತೆ ಇದೆ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸಲಾಗದೆ ತೊಂದರೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪೂರ್ವ ಪ್ರಯೋಜಿತ ನಾಟಕದಿಂದ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ನೀಡಿದೆ. ಮುಡಾ ಹಗರಣಕ್ಕೂ ಇಡಿಗೂ ಸಂಬಂಧವಿಲ್ಲ. ಇದರಲ್ಲಿ ಹಣಕಾಸಿನ ವ್ಯವಹಾರ ನಡೆದಿಲ್ಲ. ಜಮೀನಿನ ವ್ಯವಹಾರವಾಗಿದ್ದು, ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಮಾಡುತ್ತಿದ್ದಾರೆ. ಇದರಲ್ಲಿ ಅವರು ಸಫಲವಾಗುವುದಿಲ್ಲ ಎಂದರು.