ಮಂಗಳೂರು : ಶಿಕ್ಷಕರು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಕಾರಣರಾಗುತ್ತಾರೆ. ಅಂತಹ ಗುರುಗಳೇ ವಿದ್ಯಾರ್ಥಿಗಳಿಗೆ ಆದರ್ಶ ವ್ಯಕ್ತಿಗಳಾಗುತ್ತಾರೆ. ಶಿಕ್ಷಕರು ಕೇವಲ ಪಾಠ ಮಾಡುವುದರಿಂದ ಆದರ್ಶ ವ್ಯಕ್ತಿಗಳಾಗುವುದಿಲ್ಲ. ವಿದ್ಯಾರ್ಥಿಗಳೊಂದಿಗಿನ ಒಡನಾಟ, ಆತ್ಮೀಯತೆ, ವಿಷಯವನ್ನು ಮನದಟ್ಟು ಮಾಡುವ ವಿಧಾನದಿಂದ ಆದರ್ಶ ವ್ಯಕ್ತಿಗಳಾಗುತ್ತಾರೆ ಎಂದು ಪ್ರೊ.ಬಿ.ರಾಜಗೋಪಾಲ್ ಭಟ್ ಹೇಳಿದರು.
ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್ ಮಂಗಳೂರು ಇದರ ವತಿಯಿಂದ ನಡೆದ ನಡೆದ ಶಿಕ್ಷಕರ ದಿನಾಚರಣೆ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು, ಸಮರ್ಪಣಾ ಮನೋಭಾವ ಹಾಗೂ ಒಳ್ಳೆಯ ಹವ್ಯಾಸವನ್ನು ಮೈಗೂಡಿಸಿಕೊಳ್ಳಬೇಕು. ಶಿಕ್ಷಕರಲ್ಲಿ ಸಮರ್ಪಣಾ ಭಾವ ಇರುವಂತೆ ವಿದ್ಯಾರ್ಥಿಗಳಲ್ಲೂ ಇರಬೇಕು ಎಂದರು.
ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್ ನಾಯಕ್ ಮಾತನಾಡಿ ‘ಯಾವುದೇ ನಿರೀಕ್ಷೆಯಿಲ್ಲದೆ ಕಲಿಸುವವರೇ ಶಿಕ್ಷಕರಾಗಿದ್ದು ಅವರು ವಿದ್ಯಾರ್ಥಿಗಳ ಏಳಿಗೆಗಾಗಿ ತಮ್ಮ ಸರ್ವಸ್ವವನ್ನು ಅರ್ಪಿಸುವರು. ಶಿಕ್ಷಕರು ಯಾವುದೇ ತಾರತಮ್ಯ ಇಲ್ಲದೆ ವಿದ್ಯಾರ್ಥಿಗಳ ಶ್ರೇಯಸ್ಸಿಗೋಸ್ಕರ ಸಮರ್ಪಣಾ ಮನೋಭಾವದಿಂದ ದುಡಿಯುತ್ತಾರೆ. ಅಂತಹ ಶಿಕ್ಷಕರಿಗೆ ಹಾಗೂ ನಮ್ಮ ಓದಿಗೆ ಪೂರಕವಾಗಿ ಸಹಕರಿಸುವ ಪ್ರತಿಯೊಬ್ಬರಿಗೂ ಚಿರಋಣಿಯಾಗಿರಬೇಕು ಎಂದು
ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಪ್ರೊ. ಬಿ. ರಾಜಗೋಪಾಲ್ ಭಟ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.
ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್, ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್.ನಾಯಕ್, ವಿನಯ್ ಕುಮಾರ್ ಬಿ., ಕರುಣಾಕರ ಬಳ್ಕೂರು ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾದ ಚಂದಿರಾ ಭಟ್ ಸ್ವಾಗತಿಸಿ, ಕಾರ್ಯದರ್ಶಿ ಆದಿತ್ಯ ಎನ್ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಹಿಂದಿ ವಿಭಾಗದ ಮುಖ್ಯಸ್ಥ ಪ್ರಮೋದ್ ಕಿಣಿ
ಕಾರ್ಯಕ್ರಮ ನಿರೂಪಿಸಿದರು.