ಜಿಲ್ಲೆ

ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಒಂಟಿ ಮನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಬಿಬಿಎಂಪಿ ಜ.20ರವರೆಗೆ ವಿಸ್ತರಿಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರು ಒಂಟಿ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂ. ಸಹಾಯಧನ ಪಡೆಯಲು ಆನ್‌ಲೈನ್ ಮುಖೇನ ಅರ್ಜಿ ಸಲ್ಲಿಸಲು ನ.18ರವರೆಗೆ ಕೊನೆಯ ದಿನಾಂಕವಾಗಿತ್ತು. ಆದರೆ, ಈ ಅವಧಿಯಲ್ಲಿ ಅರ್ಜಿದಾರರು ಸಮರ್ಪಕವಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಸ್ಥಳೀಯ ಶಾಸಕರು ಪಾಲಿಕೆ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಕಾಶವನ್ನು ಬಿಬಿಎಂಪಿ ನೀಡಿದೆ.

ಆಸಕ್ತರು, http://welfare.bbmpgov. ವೆಬ್‌ಸೈಟ್‌ನಲ್ಲಿ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕ ಪಾವತಿಸಿ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು. ಅಲ್ಲದೆ, ಎಲ್ಲ ವಲಯಗಳ ಜಂಟಿ ಆಯುಕ್ತರ ಕಚೇರಿಗಳಲ್ಲಿ ಸ್ಥಾಪಿಸಿರುವ ಸಹಾಯ ಕೇಂದ್ರದಲ್ಲೂ ಅರ್ಜಿ ಸಲ್ಲಿಸಬಹುದು.