ಮಂಡ್ಯ: ಮಂಡ್ಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಭರ್ತಿ ಮಾಡುವ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜ.5ರವರೆಗೆ ವಿಸ್ತರಣೆ ಮಾಡಲಾಗಿದೆ. ಮಾಹಿತಿಗೆ ದೂ.ಸಂ 08232-227709 ಸಂಪರ್ಕಿಸಬಹುದು.
ಅಂತೆಯೇ ಶ್ರೀರಂಗಪಟ್ಟಣ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ಸಂಬಂಧ ಮಾಹಿತಿಗಾಗಿ ದೂ.ಸಂ 08236-295349 ಸಂಪರ್ಕಿಸಬಹುದು. ಅದೇ ರೀತಿ ದುದ್ದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗೆ ಸಂಬಂಧಿಸಿದ ವಿವರವನ್ನು ದೂ.ಸಂ 08232-227575 ಮೂಲಕ ಪಡೆಯಬಹುದೆಂದು ಪ್ರಕಟಣೆ ತಿಳಿಸಿದೆ.