ಜಿಲ್ಲೆ

ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ; ಉದ್ಯೋಗ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಗೆ ಸಂಯೋಜನೆಯಾಗಿರುವ ನೋಂದಾಯಿತ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರ ಹುದ್ದೆಗೆ ಅರ್ಜಿಗಳನ್ನು ಆಗಸ್ಟ್ 10 ರೊಳಗೆ ಸಲ್ಲಿಸಲು ಆಹ್ವಾನಿಸಲಾಗಿತ್ತು.

ಸದರಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಆಗಸ್ಟ್ 25 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳನ್ನು ಜಾಲತಾಣ www.ksndmc.org ನಿಂದ ಪಡೆದುಕೊಳ್ಳಬಹುದು.