ಜಿಲ್ಲೆ

ವಿಪರೀತ ಮದ್ಯ ಸೇವಿಸಿದ ವ್ಯಕ್ತಿ ಮಲಗಿದಲ್ಲಿಯೆ ಸಾವು

Haveri - Kariyappa Aralikatti

ರಾಣೆಬೆನ್ನೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ಮೃತಪಟ್ಟ ಘಟನೆ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಸಂತೋಷ ನಾಗಪ್ಪ ಚಲವಾದಿ (40) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಮದ್ಯ ಸೇವಿಸಿದ ಅಮಲಿನಲ್ಲಿ ಮನೆಯಲ್ಲಿ ಮಲಗಿದ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.