ಶಿವಮೊಗ್ಗದಲ್ಲಿ ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಗೆ ರಕ್ತದಾನ, ನೇತ್ರದಾನ ಹಾಗೂ ದೇಹದಾನ ಶಿಬಿರ ಆಯೋಜಿಸಲಾಗಿತ್ತು.  
ಜಿಲ್ಲೆ

200ಕ್ಕೂ ಹೆಚ್ಚು ಜನರಿಂದ ನೇತ್ರ, ದೇಹ, ರಕ್ತದಾನ

ಶಿವಮೊಗ್ಗ: ಜೆಸಿಐ ಶಿವಮೊಗ್ಗ, ಶಂಕರ ಕಣ್ಣಿನ ಆಸ್ಪತ್ರೆ, ಸಂಜೀವಿನಿ ಬ್ಲಡ್ ಬ್ಯಾಂಕ್ ಹಾಗೂ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಸಹಕಾರದೊಂದಿಗೆ ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಗೆ ರಕ್ತದಾನ, ನೇತ್ರದಾನ ಹಾಗೂ ದೇಹದಾನ ಶಿಬಿರ ಆಯೋಜಿಸಲಾಗಿತ್ತು.

200ಕ್ಕೂ ಅಧಿಕ ಮಂದಿ ರಕ್ತದಾನ, ಕಣ್ಣಿನದಾನ, ದೇಹದಾನ ಮಾಡಿದರು. ಈ ಮೂಲಕ ಜೀವ ಉಳಿಸುವ ಹಾಗೂ ಮತ್ತೊಬ್ಬರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸೇವೆಯನ್ನು ಮತ್ತಷ್ಟು ಹೆಚ್ಚು ಮಾಡುವುದಾಗಿ ಪ್ರತಿಜ್ಞೆ ಮಾಡಿದರು.
ಜೆಸಿಐ ಶಿವಮೊಗ್ಗದ ಅಧ್ಯಕ್ಷೆ ಪೂರ್ಣಿಮಾ ಸುನೀಲ್, ಒಇಐನ ಅನುಷ್ ಗೌಡ, ಕೋ ಆರ್ಡಿನೇಟರ್ ಪ್ರದೀಪ್, ಶಂಕರ ಕಣ್ಣಿನ ಆಸ್ಪತ್ರೆಯ ಡಾ. ವಿಶ್ವಾಸ್, ಸಂಜೀವಿನಿ ಬ್ಲಡ್ ಬ್ಯಾಂಕ್‌ನ ದಿನಕರ್, ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಡಾ. ರೇಖಾ, ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಗಣೇಶ್, ಕಾರ್ಯದರ್ಶಿ ರಾಘವೇಂದ್ರ ಇತರರಿದ್ದರು.