ಜಿಲ್ಲೆ

300ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಮಾಜಿ ಸಚಿವ ದಿ.ಎಚ್.ಎಸ್. ಮಹದೇವಪ್ರಸಾದ್ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ತಾಲೂಕಿನ ಹರವೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಭಿಮಾನಿ ಬಳಗದಿಂದ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸುವ ಮೂಲಕ ಆಚರಿಸಲಾಯಿತು.

ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣೆ ಶಿಬಿರಕ್ಕೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಚಾಲನೆ ನೀಡಿದರು. 300ಕ್ಕೂ ಹೆಚ್ಚು ಜನರು ಕಣ್ಣಿನ ತಪಾಸಣೆಗೊಳ್ಳಪಟ್ಟರು. ಕಣ್ಣಿನ ಪೊರೆಯುಳ್ಳ 130ಕ್ಕೂ ಹೆಚ್ಚು ಜನರನ್ನು ಕೊಯಮತ್ತೂರು ಕಣ್ಣಾಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಗ್ರಾಮದ ಹರವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಬುಕ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು.

ಇದೇ ವೇಳೆ ಹರವೆ ಮಠದ ಶ್ರೀಸರ್ಪಭೂಷಣಸ್ವಾಮೀಜಿ ಮಾತನಾಡಿದರು. ಎಚ್.ಎಸ್. ಮಹದೇವಪ್ರಸಾದ್ ಅಭಿಮಾನಿ ಬಳಗದ ಅಧ್ಯಕ್ಷ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆರೆಹಳ್ಳಿ ನವೀನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಮುಖಂಡರಾದ ಮುಕ್ಕಡಹಳ್ಳಿ ರವಿಕುಮಾರ್, ಗುರುಸಿದ್ದೇಗೌಡ, ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಹಳೇಪುರ ಬೆಳ್ಳೇಗೌಡ, ಮಲೆಯೂರು ಸುನೀಲ್. ಕೆ.ಎಲ್. ರವಿಕುಮಾರ್, ಕೆಂಡಾ ಮಹೇಶ್ ಮತ್ತು ಇತರರು ಇದ್ದರು.