ವಿಜಯವಾಣಿ ಸುದ್ದಿಜಾಲ ಹೆಬ್ರಿ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರ ವತಿಯಿಂದ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನೇತ್ರ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ನಡೆಯಿತು.
ಮುನಿಯಾಲು ಲಯನ್ಸ್ ಕ್ಲಬ್ ಅಧ್ಯಕ್ಷ ಭುಜಂಗ ಶೆಟ್ಟಿ ಉದ್ಘಾಟಿಸಿದರು. ಮುದ್ದುಮನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಸಂಚಾಲಕ ಶಂಕರ ಶೆಟ್ಟಿ ಮಾಹಿತಿ ನೀಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ಜ್ಞಾನ ವಿಕಾಸ ಕೇಂದ್ರದ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿದರು.
ವರಂಗ ಗ್ರಾಮ ಪಂಚಾಯಿತಿ ಸದಸ್ಯೆ ತಾರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿರೂರು ಎಂ.ಡಿ.ಅಧಿಕಾರಿ ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಪ್ರಧಾನ ಕಾರ್ಯದರ್ಸಿ ಪಡುಪರ್ಕಳ ಹರೀಶ ಶೆಟ್ಟಿ, ಉದ್ಯಮಿ ಮಂಜುನಾಥ ಎಂ.ಕಾಡುಹೊಳೆ, ಪಡುಕುಡೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಗದೀಶ ಹೆಗ್ಡೆ, ಮುದ್ರಾಡಿ ವಲಯ ಜನಜಾಗೃತಿ ಸಮಿತಿಯ ಸದಸ್ಯ ಗೋಪಿನಾಥ ಭಟ್, ಪ್ರಮುಖರಾದ ಹರೀಶ ಎಸ್.ಪೂಜಾರಿ, ಪ್ರಸನ್ನ ಶೆಟ್ಟಿ, ಡಾ.ಅಭಿನಯ್, ಯೋಗೀಶ್, ಹೃದಯ ಕುಮಾರ್ ಶೆಟ್ಟಿ, ಸುರೇಶ ಪೂಜಾರಿ, ಶ್ರೀನಿವಾಸ ಆಚಾರ್ಯ, ಚಿತ್ರಾ, ಧರ್ಮಸ್ಥಳ ಯೋಜನೆ ಮತ್ತು ಪಡುಕುಡೂರು ಜ್ಞಾನ ವಿಕಾಸ ಕೇಂದ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೇಲ್ವೀಚಾರಕಿ ಸುಮಲತಾ ಸ್ವಾಗತಿಸಿದರು. ಜ್ಞಾನವಿಕಾಸ ಯೋಜನೆ ಸಮನ್ವಯಾಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.