ಜಿಲ್ಲೆ

ಚಿಲಕವಾಡಿಯಲ್ಲಿ ಕಣ್ಣಿನ ಆರೋಗ್ಯ ತಪಾಸಣೆ

ಎ. ಆರ್. ರಘುರಾಮ

ಕೊಳ್ಳೇಗಾಲ ತಾಲೂಕಿನ ಚಿಲಕವಾಡಿ ಗ್ರಾಮದ ನಿಜಗುಣಾನುಭವ ಮಂಟಪದಲ್ಲಿ ಸೋಮವಾರ ನಿಜಗುಣ ಫೌಡೇಷನ್ ಹಾಗು ಮೈಸೂರಿನ ಎಂಆರ್‌ಸಿ ಆಸ್ಪತ್ರೆಯ ಸಹಯೋಗದಲ್ಲಿ ಕಣ್ಣಿನ ತಪಾಸಣೆ ಉಚಿತ ಶಿಬಿರ ಆಯೋಜಿಸಲಾಗಿತ್ತು. ಶಿಬಿರಕ್ಕೆ ನಿಜಗುಣ ಪೀಠದ ಶ್ರೀ ಬಾಲಷಡಕ್ಷರ ಸ್ವಾಮೀಜಿ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರೂ ಆರೋಗ್ಯದ ವಿಷಯದಲ್ಲಿ ಕಾಳಜಿ ವಹಿಸಬೇಕು ಎಂದರು. ಮನುಷ್ಯನ ದೇಹದಲ್ಲಿ ಕಣ್ಣು ಸೂಕ್ಷ್ಮಅಂಗ. ಇದರ ಸುರಕ್ಷತೆ ಬಗ್ಗೆ ನಾವು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದು ಸಲಹೆ ನೀಡಿದರು. ಬಡ ಜನರಿಗೆ ಅನುಕೂಲವಾಗುವಂತೆ ಮಠದ ವತಿಯಿಂದ ಪ್ರತಿ ತಿಂಗಳು ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತಿದೆ. ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.