ಜಿಲ್ಲೆ

ಹುಬ್ಬಳ್ಳಿಯಲ್ಲಿ ನೇತ್ರ ತಪಾಸಣೆ ಶಿಬಿರ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ಕೋ -ಆಪರೇಟಿವ್ ಹಾಸ್ಪಿಟಲ್ ಸೊಸೈಟಿಯು ಶತಮಾನೋತ್ಸವ ಸಂದರ್ಭದಲ್ಲಿ ಕೆ.ಎಲ್.ಇ. ಜೆ.ಜಿ.ಎಂ.ಎಂ. ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಅ. 6ರಂದು ಬೆಳಗ್ಗೆ 10ಕ್ಕೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಕನ್ನಡಕಗಳನ್ನು ನೀಡಲಾಗುವುದು ಎಂದು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.