ಹಗರಿಬೊಮ್ಮನಹಳ್ಳಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆನಂದ್ ಡೊಳ್ಳಿನ್, ಮ್ಯಾನೇಜರ್ ಶೋಭಾ, ಮುಖ್ಯ ವೈದ್ಯಾಧಿಕಾರಿ ಗುರುಬಸವರಾಜ್, ವೈದ್ಯರಾದ ಹಾಲಮ್ಮ, ಉಮಾ ಪಾಟೀಲ್ ಇತರರಿದ್ದರು. 
ಜಿಲ್ಲೆ

ಏಕಾಗ್ರತೆಯಿಂದ ಪರೀಕ್ಷೆ ಎದುರಿಸಿ

ಗಾಯತ್ರಿ ಮಾಲಿಪಾಟೀಲ್

ಹಗರಿಬೊಮ್ಮನಹಳ್ಳಿ: ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಹಾಗೂ ಆತಂಕಪಡದೆ ಏಕಾಗ್ರತೆಯಿಂದ ಪರೀಕ್ಷೆ ಎದುರಿಸಬೇಕೆಂದು ತಾಲೂಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆನಂದ್ ಡೊಳ್ಳಿನ್ ಹೇಳಿದರು.

ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖ್ಯ ವೈದ್ಯಾಧಿಕಾರಿ ಗುರುಬಸವರಾಜ್ ಮಾತನಾಡಿ, ಯೋಗ ಮತ್ತು ಆರೋಗ್ಯಕರ ಜೀವನ ಶೈಲಿಯ ಅವಶ್ಯ ಕುರಿತು ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಶೋಭಾ, ವೈದ್ಯರಾದ ಹಾಲಮ್ಮ, ಉಮಾ ಪಾಟೀಲ್, ಭೀಮನಗೌಡ, ಯಶ್ವಂತ್, ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಜ್ಯೋತಿ ಇತರರಿದ್ದರು.