ಜಿಲ್ಲೆ

ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಸಾಧನೆ ಮಾಡಿ: ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಂದಿನ ಕಂಪ್ಯೂಟರ್ ಯುಗದಲ್ಲಿ ಎಂಸಿಎ ಕಲಿತ ವಿದ್ಯಾರ್ಥಿಗಳಿಗೆ ಬೇಡಿಕೆ ಇದೆ. ಉದ್ಯೋಗಾಧಾರಿತ ಕೋರ್ಸ್ ಇದಾಗಿದ್ದು, ವಿದ್ಯಾರ್ಥಿಗಳು ಸತತ ಪ್ರಯತ್ನ, ಹೊಸ ಆವಿಷ್ಕಾರಗಳೊಂದಿಗೆ ಜಾಣ್ಮೆಯನ್ನು ತೋರಬೇಕು. ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಸಾಧನೆ ಮಾಡಬೇಕು ಎಂದು ಜೆಎಸ್‌ಎಸ್ ಕಾರ್ಯಾಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ನಗರದ ಜೆೆಎಸ್‌ಎಸ್ ಕಾಲೇಜಿಗೆ ಗುರುವಾರ ಭೇಟಿ ನೀಡಿದ್ದ ಅವರು, ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಎಂಸಿಎ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಜಗತ್ತು ಈಗ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ನತ್ತ ಮುಖ ಮಾಡಿದೆ. ವ್ಯಾಸಂಗದ ಜತೆ ಎಐ ಬಗ್ಗೆ ಮಾಹಿತಿ ಹೊಂದಬೇಕು. ಇದರಿಂದ ಮುಂದೆ ಉನ್ನತ ಉದ್ಯೋಗಾವಕಾಶಗಳು ದೊರೆಯಲಿವೆ ಎಂದರು.

ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಮಾತನಾಡಿ, ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಪೂಜ್ಯ ಹೆಗ್ಗಡೆಯವರ ಆಶೀರ್ವಾದ ದೊರೆತಿದೆ. ಇದು ನಮ್ಮೆಲ್ಲರ ಸೌಭಾಗ್ಯ ಎಂದರು.

ಎAಸಿಎ ಕಾಲೇಜಿನ ನಿರ್ದೇಶಕ ಡಾ. ಸೂರಜ್ ಜೈನ್ ವಂದಿಸಿದರು. ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.