ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶ್ವ ಆಟಿಸಂ ಜಾಗೃತಿ ಸಪ್ತಾಹ ಕಾರ್ಯಕ್ರಮ ನಡೆಯಿತು.  
ಜಿಲ್ಲೆ

ಆತ್ಮಸ್ಥೈರ್ಯದಿಂದ ಸವಾಲು ಎದುರಿಸಿ

Karthika K.S

ಕುಂದಾಪುರ: ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ ಮುನ್ನೆಡೆಯಬೇಕು ಎಂದು ಹೇಮಾ ರಾವ್ ಹೇಳಿದರು.

ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರವರ್ತಿತ ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ದೊಡ್ಡಣ್ಣಗುಡ್ಡೆ ಡಾ.ಎ.ವಿ.ಬಾಳಿಗ ಮೆಮೊರಿಯಲ್ ಆಸ್ಪತ್ರೆ, ಕಮಲಾ ಎ.ಬಾಳಿಗಾ ಚಾರಿಟೆಬಲ್ ಟ್ರಸ್ಟ್, ಆಟಿಸಂ ಸೊಸೈಟಿ ಆಫ್ ಉಡುಪಿ ಇವುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಆಟಿಸಂ ಜಾಗೃತಿ ಸಪ್ತಾಹ-2025 ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಟಿಸಂ ಮಕ್ಕಳ ಲಾಲನೆ ಪಾಲನೆಯಲ್ಲಿ ಎದುರಾಗುವ ಸವಾಲುಗಳು ಹಾಗೂ ಮನೆಯಲ್ಲಿಯೇ ಇರುವ ಸರಳ ವಸ್ತುಗಳ ಮೂಲಕ ಮಕ್ಕಳಿಗೆ ತರಬೇತಿ ನೀಡುವ ಬಗ್ಗೆ ಮಾಹಿತಿ ನೀಡಿದರು.

ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ಟಿ., ಎಸ್‌ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್ ಉಪಸ್ಥಿತರಿದ್ದರು. ಲೆಕ್ಕ ಸಹಾಯಕಿ ರೂಪಾ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರುತಿ ವಂದಿಸಿದರು. ಸಹ ಶಿಕ್ಷಕಿ ಪ್ರತಿಮಾ ನಿರೂಪಿಸಿದರು.