ಜಿಲ್ಲೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೌಲಭ್ಯ ವಿತರಣೆ

ಜಿ.ಹೆಚ್. ಧನ್ಯಕುಮಾರ್

ಮೂಡಿಗೆರೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಲ್ಲಿ ಜಾವಳಿ ಗ್ರಾಮದ ಫಲಾನುಭವಿ ರಮೇಶ್ ಎಂಬುವವರಿಗೆ ವಾಕಿಂಗ್ ಸ್ಟಿಕ್ ಹಾಗೂ ವಿವಿಧ ಉಪಯುಕ್ತ ವಸ್ತುಗಳನ್ನು ವಿತರಿಸಲಾಯಿತು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಪರೀಕ್ಷಿತ್ ಜಾವಳಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅನಾರೋಗ್ಯ ಪೀಡಿತರು, ವಿಕಲಚೇತನರು, ದುರ್ಬಲರು ಮತ್ತು ವೃದ್ಧರನ್ನು ಗುರುತಿಸಿ ವಾಕಿಂಗ್ ಸ್ಟಿಕ್, ಮಾಶಾಸನ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತಿದೆ. ಗ್ರಾಮೀಣ ಭಾಗದ ವೃದ್ಧರು, ಅಶಕ್ತರನ್ನು ಗುರುತಿಸಿ ಅವರಿಗೆ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ ಎಂದರು.

ಈ ವೇಳೆ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಸಂದೇಶ್, ಸೇವಾಪ್ರತಿನಿಧಿ ಸಂದೀಪ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಚಂದ್ರಶೇಖರ್ ಇತರರಿದ್ದರು.