ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದ ರೈತ ಸಂಘದ ಗ್ರಾಮ ಘಟಕವನ್ನು ಪ್ರಕಾಶ್ ಉದ್ಘಾಟಿಸಿದರು. ಷಣ್ಮುಖಸ್ವಾಮಿ, ಗಣೇಶ್ ಇತರರಿದ್ದರು. 
ಜಿಲ್ಲೆ

ಸಂಘಟಿತರಾದರೆ ಮಾತ್ರ ಸೌಲಭ್ಯ

ವಸಂತಕುಮಾರ್ ಬಿ

ಗುಂಡ್ಲುಪೇಟೆ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ರೈತರ ಸಮಸ್ಯೆಗಳಿಗೆ ಇನ್ನೂ ಪರಿಹಾರ ದೊರಕುತ್ತಿಲ್ಲ ಎಂದು ಸಾಮೂಹಿಕ ನಾಯಕತ್ವದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಹೇಳಿದರು.

ಶನಿವಾರ ರಾತ್ರಿ ತಾಲೂಕಿನ ಬೇರಂಬಾಡಿ ಗ್ರಾಮದಲ್ಲಿ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು.

ಕಾಡಂಚಿನ ಗ್ರಾಮಗಳಲ್ಲಿ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದರೂ ಜನಪ್ರತಿನಿಧಿಗಳು ಹಾಗೂ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸರ್ಕಾರದಿಂದ ನಿಯೋಜನೆಯಾದ ಅಧಿಕಾರಿಗಳು ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ರೈತರ ಕೆಲಸ ಮಾಡಬೇಕಾಗಿದ್ದರೂ ಅದು ಆಗುತ್ತಿಲ್ಲ. ರೈತರು ಸಂಘಟಿತರಾದರೆ ಮಾತ್ರ ತಮಗೆ ದೊರಕಬೇಕಾದ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಜಿಲ್ಲೆಯ ಹನೂರು ಮತ್ತು ಗುಂಡ್ಲುಪೇಟೆ ತಾಲೂಕುಗಳ ರೈತರು ಸಂಘಟನೆಯತ್ತ ಮುಖ ಮಾಡಿದ್ದಾರೆ. ಸದ್ಯ ಯಾವುದೇ ಸರ್ಕಾರಿ ಕಚೇರಿಗಳಲ್ಲಿಯೂ ರೈತರ ಕೆಲಸ ಕಾರ್ಯಗಳು ಆಗುತ್ತಿಲ್ಲ, ರೈತ ಸಂಘವು ರೈತರಿಗೆ ಸಂವಿಧಾನದ ಮತ್ತು ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಷಣ್ಮುಖಸ್ವಾಮಿ, ಗಣೇಶ್, ರಾಜು, ಮಹೇಂದ್ರ ಇತರರು ಇದ್ದರು.