ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಲ್ಲಿ ಕಿಡಿಗೇಡಿಗಳು ಮೂರನೇ ಬಾರಿಗೆ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 31ರಂದು ಡಿಸಿ ಉಡುಪಿ ಎಂಬ ಇನ್ನೊಂದು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ, ಡಿಸಿ ಫೋಟೋವನ್ನು ಪ್ರೋಫೈಲ್‌ಗೆ ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಣ ಕೇಳಿ ಸಾರ್ವಜನಿಕರಿಗೆ ಸಂದೇಶ ಕಳುಹಿಸಿ ಅವರ ವೈಯಕ್ತಿಕ ಗೌರವಕ್ಕೆ ಧಕ್ಕೆ ಉಂಟು ಮಾಡಲಾಗಿದೆ ಎಂದು ದೂರಲಾಗಿದೆ. 26ರಂದು ಮತ್ತು ಏಪ್ರಿಲ್‌ನಲ್ಲಿಯೂ ಜಿಲ್ಲಾಧಿಕಾರಿ ಹೆಸರಿನಲ್ಲಿ ಇದೇ ರೀತಿ ನಕಲಿ ಖಾತೆ ಸೃಷ್ಟಿಸಲಾಗಿತ್ತು.