ಜಿಲ್ಲೆ

ಸಾಧಕ ವಿದ್ಯಾರ್ಥಿನಿಗೆ ಸನ್ಮಾನ

ಮಂಜುನಾಥ ಅಂಗಡಿ

ಧಾರವಾಡ: ಬೆಂಗಳೂರಿನಲ್ಲಿ ಜರುಗಿದ 40ನೇ ರಾಜ್ಯಮಟ್ಟದ ಟೆಕ್ವಾಂಡೋ ಸ್ಪರ್ಧೆಯ 67 ಕೆ.ಜಿ. ವಿಭಾಗದಲ್ಲಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಸಹನಾ ಗೋಕಾವಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಅಭಿನಂದಿಸಿದರು. ರಾಷ್ಟ್ರಮಟ್ಟದಲ್ಲಿ ಸಾಧನೆಗೈಯಲಿ ಎಂದು ಶುಭ ಹಾರೈಸಿದರು.