ಎಸ್‌ಕೆಪಿಎ ಕಾಪು ವಲಯ ಕುಟುಂಬ ಸಮ್ಮಿಲನವನ್ನು ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು 
ಜಿಲ್ಲೆ

ವೃತ್ತಿ ಒತ್ತಡದಲ್ಲೂ ಕುಟುಂಬ ಸಮ್ಮಿಲನ : ಪದ್ಮಪ್ರಸಾದ್ ಜೈನ್

ಇಂದಿರಾ ಎನ್ ಕೆ

ಪಡುಬಿದ್ರಿ: ವೃತ್ತಿಯ ಒತ್ತಡದ ನಡುವೆ ಕುಟುಂಬ ಸಮ್ಮಿಲನದಂತಹ ಕಾರ್ಯಕ್ರಮಗಳು ಸದಸ್ಯರಿಗೆ ಅನಿವಾರ್ಯ ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕೇಂದ್ರ ಸಮಿತಿ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ಹೇಳಿದರು.

ಎಸ್‌ಕೆಪಿಎ ಕಾಪು ವಲಯ ವತಿಯಿಂದ ಭಾನುವಾರ ವಲಯದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಕಾಪು ವಲಯ ಅಧ್ಯಕ್ಷ ಸಚಿನ್ ಉಚ್ಚಿಲ, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್, ಕಾಪು ವಲಯದ ಉಪಾಧ್ಯಕ್ಷರಾದ ಸಂತೋಷ್ ಕಾಪು, ಸತೀಶ್ ಎರ್ಮಾಳು, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್, ಕೋಶಾಧಿಕಾರಿ ಕಿರಣ್ ಕಾಪು ಉಪಸ್ಥಿತರಿದ್ದರು. ಅಶ್ವತ್ಥ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.