ಮೂಡುಬಿದಿರೆ: ಪ್ರತಿ ವ್ಯಕ್ತಿಯೂ ತನ್ನ ಜವಾಬ್ದಾರಿ, ಬದ್ಧತೆಯನ್ನು ಸರಿಯಾಗಿ ನಿರ್ವಹಿಸಿ ಶಿಸ್ತಿನಿಂದ ಕೂಡಿದ ಸಂತೃಪ್ತ ಜೀವನ ನಡೆಸಿದರೆ ಅದೇ ದೊಡ್ದ ಸೇವೆ ಎಂದು ಹಿರಿಯ ವಕೀಲ ಇರುವೈಲು ತಾರಾನಾಥ ಪೂಜಾರಿ ಹೇಳಿದರು.
ಇರುವೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿ ಶಕುಂತಲಾ ಶೆಣೈ ಅವರಿಗೆ ಬೀಳ್ಕೋಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇರುವೈಲ್ ಗ್ರಾಪಂ ಅಧ್ಯಕ್ಷೆ ಲಲಿತಾ ಮುಗೇರ, ಶಾಲಾ ದಶಮಾನೋತ್ಸವ ಸಮಿತಿ ಅಧ್ಯಕ್ಷ ಮೋಹನ್ ಟಿ., ಎಸ್‌ಡಿಎಂಸಿ ಅಧ್ಯಕ್ಷ ಸುನೀಲ್ ಕುಮಾರ್ ಕಟ್ಟಣಿಗೆ, ಕೆಡಿಪಿ ಸದಸ್ಯ ಪ್ರವೀಣ್, ಗ್ರಾಪಂ ಸದಸ್ಯರಾದ ನವೀನ್ ಪೂಜಾರಿ ಕಿಟ್ಟುಬೆಟ್ಟು, ನಾಗೇಶ್ ಅಮೀನ್, ರುಕ್ಮಿಣಿ, ಮೋಹಿನಿ, ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತಾ ಫರ್ನಾಂಡಿಸ್ ಉಪಸ್ಥಿತರಿದ್ದರು. ಶಿಕ್ಷಕಿ ಉಷಾ ಸ್ವಾಗತಿಸಿದರು. ಶ್ಯಾಮಲಾ ಕಾರ್ಯಕ್ರಮ ನಿರೂಪಿಸಿದರು. ದಿವ್ಯ ವಂದಿಸಿದರು.