ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂದಲ್ಲಿ ಸೇವೆ ಸಲ್ಲಿಸಿದ ಮುಖ್ಯಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ಶರ್ಮ ಅವರನ್ನು ಬೀಳ್ಕೊಡಲಾಯಿತು 
ಜಿಲ್ಲೆ

ಸದಸ್ಯರ ಅಭಿವೃದ್ಧಿಗೆ ಶ್ರಮ : ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಭಾಕರ ಶೆಟ್ಟಿ ಹೇಳಿಕೆ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಬೈಂದೂರು

ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘ ಸದಸ್ಯರ ಅಭಿವೃದ್ಧಿಗೆ ಸಂಪೂರ್ಣವಾಗಿ ಶ್ರಮಿಸುತ್ತಿದೆ. ಸಂಘದ ಬೆಳವಣಿಗೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಾರ್ಗದರ್ಶನ, ಸಹಕಾರ ಮರೆಯುವಂತಿಲ್ಲ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಹೇಳಿದರು.

ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ಶರ್ಮ ಹಾಗೂ ಜೂನ್30ರಂದು ನಿವೃತ್ತರಾಗಲಿರುವ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಡ್ಕಲ್ ಚರ್ಚ್ ಧರ್ಮಗುರು ಮಾಣಿ ವಿ.ಎಂ. ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ರಾಜು ಪೂಜಾರಿ, ಮೊಳಹಳ್ಳಿ ಮಹೇಶ ಹೆಗ್ಡೆ, ಗ್ರಾಪಂ ಅಧ್ಯಕ್ಷೆ ಪಾರ್ವತಿ ಬೆಳಾರಿ ಮಾತನಾಡಿದರು. ಸಂಘದ ನಿರ್ದೇಶಕರಾದ ಮಹಾಬಲ ಪೂಜಾರಿ, ಜೋಸೆಫ್ ಕೆ.ಎಂ., ಗುರುರಾಜ್ ಪೂಜಾರಿ, ಸುರೇಂದ್ರ ನಾಯ್ಕ, ರವೀಂದ್ರ ಶೆಟ್ಟಿ, ಪುನೀತ್ ಶೆಟ್ಟಿ, ರೋಸಮ್ಮ, ನಾಗರತ್ನಾ ಶೆಟ್ಟಿ, ಮನೋಜ್, ಮುತ್ತ, ಸಹಕಾರ ಸಂಘಗಳ ಮೇಲ್ವಿಚಾರಕ ಶಿವರಾಮ ಪೂಜಾರಿ, ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಸಾದ್ ನಾಯ್ಕ ಇದ್ದರು. ಪ್ರಸನ್ನ ವಿ.ಶರ್ಮ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ದೇವದಾಸ್ ವಿ.ಜೆ. ಸ್ವಾಗತಿಸಿ, ನಿರ್ದೇಶಕ ವಿನೋದ್ ಜಾರ್ಜ್ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.