ಸುಳ್ಯ: ನಗರದ ಸೈಂಟ್ ಜೋಸೆಫ್ ಶಾಲೆಯಲ್ಲಿ 17ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಸಿಸ್ಟರ್ ಬಿನೋಮ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದು ಸುಳ್ಯದಿಂದ ತೆರಳಲಿರುವ ಸಿಸ್ಟರ್ ಬಿನೋಮ ಅವರಿಗೆ ಬುಧವಾರ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
2007ರಲ್ಲಿ ಸುಳ್ಯದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗೆ ಮುಖ್ಯಶಿಕ್ಷಕಿಯಾಗಿ ಬಂದಿದ್ದರು. ಸುದೀರ್ಘ 17ವರ್ಷ ಮುಖ್ಯ ಶಿಕ್ಷಕಿಯಾಗಿ ಶಾಲಾ ಅಭಿವೃದ್ಧಿಯಲ್ಲಿ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಹಲವಾರು ವರ್ಷಗಳಲ್ಲಿ ಶೇ.100 ಫಲಿತಾಂಶ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಬುಧವಾರ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸಂಚಾಲಕ ವಿಕ್ಟರ್ ಡಿಸೋಜ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ.ಟಿಎಪಿಸಿಎಂಎಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯರಾಮ ದೇರಪ್ಪಜನಮನೆ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಜೆ.ಕೆ ರೈ, ಗುರುಸ್ವಾಮಿ, ನಗರ ಪಂಚಾಯಿತಿ ಸದಸ್ಯ ಡೇವಿಡ್ ದೀರಾ ಕ್ರಾಸ್ತ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ನವೀನ್ ಮಚಾದೊ ಮೊದಲಾದವರು ಹಾಜರಿದ್ದು ಸೈಂಟ್ ಜೋಸೆಫ್ ಶಾಲೆ ಮುಖ್ಯಶಿಕ್ಷಕಿ ಬಿನೋಮ ಅವರಿಗೆ ಶುಭ ಹಾರೈಸಿದರು.