ಜಿಲ್ಲೆ

ಕ್ರಿಮಿನಾಶಕ ಕುಡಿದು ರೈತ ಆತ್ಮಹತ್ಯೆ

Mysuru - Desk - Yashavanth Kumar N

ಮಳವಳ್ಳಿ: ತಾಲೂಕಿನ ದೇವಿಪುರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ವೆಂಕಟರಾಮು(58) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರಿಗೆ ನಾಲ್ಕು ಎಕರೆ ಜಮೀನಿದ್ದು, ಕೃಷಿ ಚಟುವಟಿಕೆಗಾಗಿ ಸ್ಥಳೀಯ ಸೊಸೈಟಿಯಲ್ಲಿ 1 ಲಕ್ಷ ರೂ., ಕೆನರಾ ಬ್ಯಾಂಕ್‌ನಲ್ಲಿ 2 ಲಕ್ಷ ರೂ., ಚಿನ್ನಾಭರಣ ಅಡವಿಟ್ಟು 2.92 ಲಕ್ಷ ರೂ., ಸ್ಥಳೀಯ ಸಂಘ-ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳಿಂದ 5 ಲಕ್ಷ ರೂ. ಸೇರಿದಂತೆ 11 ಲಕ್ಷ ರೂ.ಗಳಿಗೂ ಅಕ ಸಾಲ ಮಾಡಿದರೆನ್ನಲಾಗಿದೆ.

ಸಾಲಗಾರರ ಒತ್ತಡ ಹೆಚ್ಚಾಗಿದ್ದ ಕಾರಣ ಡಿ.9ರಂದು ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಕುಟುಂಬದವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.