ನವಲಗುಂದ: ಪಟ್ಟಣದ ವಿನಾಯಕಪೇಟೆಯ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುರಾಜ ತ್ರಿಯಂಬಕ ಹೆಬಸೂರ (63) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತರು ಕೆವಿಜಿ ಬ್ಯಾಂಕ್ನಲ್ಲಿ 8 ಲಕ್ಷ ರೂ. ಹಾಗೂ ಪಿಎಲ್ಡಿ ಬ್ಯಾಂಕ್ನಲ್ಲಿ ಕುರಿ ಸಾಕಾಣಿಕೆಗಾಗಿ 1.50 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.