ಶಿಗ್ಗಾಂವಿ: ಸಾಲಬಾಧೆಯಿಂದ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿಗ್ಗಾಂವಿ ತಾಲೂಕಿನ ಮುಗಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ಬಸಪ್ಪ ಮಲ್ಲಪ್ಪ ಬಿಶೆಟ್ಟಿ (55) ಆತ್ಮಹತ್ಯೆ ಮಾಡಿಕೊಂಡ ರೈತ. ಬ್ಯಾಂಕ್ ಹಾಗೂ ಕೈಗಡ ಸಾಲದ ಸುಳಿಯಲ್ಲಿ ಸಿಲುಕಿದ್ದ ರೈತ ಬಸಪ್ಪ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ಈಶ್ವರಗೌಡ ಪಾಟೀಲ, ಗ್ರಾಮ ಆಡಳಿತಾಧಿಕಾರಿ ಸುಕನ್ಯಾ ಮಾಲಿಂಗಪ್ಪನವರ, ಶಿಗ್ಗಾಂವಿ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.